alex Certify BIG NEWS: ಮಾಜಿ ಸಿಎಂ HDK ಸೇರಿದಂತೆ 9 ಶಾಸಕರ ಪ್ರಮಾಣವಚನ ಬಾಕಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ HDK ಸೇರಿದಂತೆ 9 ಶಾಸಕರ ಪ್ರಮಾಣವಚನ ಬಾಕಿ….!

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಆಯ್ಕೆಯಾದ ಶಾಸಕರ ಪ್ರಮಾಣವಚನಕ್ಕಾಗಿ ಎರಡು ದಿನಗಳ ಕಾಲ ಅಧಿವೇಶನ ನಡೆದಿತ್ತು. ನೂತನವಾಗಿ ಆಯ್ಕೆಯಾದ 224 ಶಾಸಕರ ಪೈಕಿ 215 ಮಂದಿ ಪ್ರಮಾಣವಚನ ಸ್ವೀಕರಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ 9 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಬೇಕಿದೆ.

ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಒಟ್ಟು ಒಂಬತ್ತು ಮಂದಿ ಪ್ರಮಾಣ ವಚನ ಸ್ವೀಕರಿಸಲು ಇನ್ನೂ ಬಾಕಿ ಇದೆ ಎನ್ನಲಾಗಿದ್ದು, ಈ ಪೈಕಿ ಆರು ಮಂದಿ ಜೆಡಿಎಸ್‌ ಶಾಸಕರಿದ್ದಾರೆ. ಇವರುಗಳು ವಿಧಾನಸಭೆಯ ಬದಲು ಸಭಾಧ್ಯಕ್ಷರ ಕೊಠಡಿಗೆ ತೆರಳಿ ಕಾರ್ಯದರ್ಶಿಗಳಿಂದ ಪ್ರಮಾಣವಚನ ಸ್ವೀಕರಿಸಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...