ದಾವಣಗೆರೆ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಒಟ್ಟು 7.62 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇದರ ಬೆನ್ನಲ್ಲೇ ಇದೀಗ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೂ ಲೋಕಾ ದಾಳಿ ಭೀತಿ ಎದುರಾಗಿದ್ದು, ದಾವಣಗೆರೆಯ ನಿವಾಸದ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.
ಲೋಕಾಯುಕ್ತ ದಾಳಿಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ. ಮಾಡಾಳ್ ಪ್ರಶಾಂತ್, ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೊಲಸ್, ಗಂಗಾಧರ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ನಡೆದ ಲೋಕಾಯುಕ್ತ ದಾಳಿ ಇಂದು ಬೆಳಿಗ್ಗೆ 4 ಗಂಟೆಗೆ ಮುಗಿದಿದ್ದು, ಪ್ರಶಾಂತ್ ಕಚೇರಿಯಲ್ಲಿ 1.62 ಕೋಟಿ ರೂ. ಹಾಗೂ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ನಗದು ಸೇರಿ ಒಟ್ಟು 7.62 ಕೋಟಿ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.