ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸ್ಮೆಟಿಕ್ ಉದ್ಯಮಿ ಸೋನಿಯಾ ಅಗರ್ವಾಲ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ವೇಳೆ ಸೋನಿಯಾ ಹಲವು ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ.
ಡ್ರಗ್ ಪೆಡ್ಲರ್ ಥಾಮಸ್ ನೀಡಿದ ಮಾಹಿತಿ ಆಧಾರದ ಮೇಲೆ ಆತನ ಸಂಪರ್ಕದಲ್ಲಿದ್ದ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಮೂವರನ್ನು ವಶಕ್ಕೆ ಪಡೆದು 90 ಗ್ರಾಂ ಗಾಂಜಾ ಸೀಜ್ ಮಾಡಿದ್ದಾರೆ.
ಚಲಿಸುತ್ತಿದ್ದ ರೈಲಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ತಾಯಿ-ಮಗು ಕ್ಷೇಮ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಅಗರ್ವಾಲ್ ಅವರನ್ನು ವಶಕ್ಕೆ ಪಡೆದ ಪೊಲೀಸರು, ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ಮಾದಕ ಸೌಂದರ್ಯದ ಹೆಸರಲ್ಲಿ ಬ್ಯೂಟಿ ಕಾಸ್ಮೆಟಿಕ್ ಗಳನ್ನು ಮಾರಾಟ ಮಾಡುತ್ತಿರುವುದಾಗಿ ಬಾಯ್ಬಿಟ್ಟಿದ್ದಾರೆ. ಅಲ್ಲದೇ ಮೇಕಪ್ ಕಿಟ್ ಬಾಕ್ಸ್ ಹಾಗೂ ಕಾಸ್ಮೆಟಿಕ್ ಬಾಕ್ಸ್ ಗಳಲ್ಲಿ ಡ್ರಗ್ಸ್ ಗಳನ್ನಿಟ್ಟು, ಪೂರೈಸುತ್ತಿದ್ದುದಾಗಿ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ.
ಡ್ರಗ್ ಪೆಡ್ಲರ್ ಥಾಮಸ್ ಸಂಪರ್ಕ ಹಾಗೂ ಹಲವು ರಾಜಕಾರಣಿ, ಉದ್ಯಮಿಗಳ ಮಕ್ಕಳು, ನಟ-ನಟಿಯರ ಸಂಪರ್ಕವಿರುವುದಾಗಿಯೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.