ಮಂಗಳೂರು: ಮಹಿಳೆ ಮೇಲೆ ಮಾನಭಂಗ ಆರೋಪ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಪುನೀತ್, ರಾಜು, ಕಿಶೋರ್, ಭವಿತ್, ರಂಜಿತ್ ಹಾಗೂ ಪ್ರಸಾದ್ ಬಂಧಿತ ಆರೋಪಿಗಳು. ಹಲ್ಲೆಗೊಳಗಾದ ರಮೀಜುದ್ದೀನ್ ಹಾಗೂ ಮಹಮ್ಮದ್ ರಫೀಕ್ ಎಂಬುವವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಸಂತ್ರಸ್ತ ಮಹಿಳೆ ಮನೆಗೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಸಾಂತ್ವನ ಹೇಳಿದರು.