ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ಮಾನ್ಯತಾ ಡೆವಲಪರ್ಸ್ ಮತ್ತು ಬಿಲ್ಡರ್ಸ್ ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರಿನ ಮಾನ್ಯತಾ ಗ್ರೂಪ್ ನ ವಿವಿಧ ಕಚೇರಿಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಮಾಲೀಕರು ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ವ್ಯತ್ಯಾಸವಾಗಿರುವ ಹಿನ್ನೆಲೆಯಲ್ಲಿ ಮಾನ್ಯತಾ ಗ್ರೂಪ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.