ಕರ್ನಾಟಕದ ಹೆಮ್ಮೆಯ ಕಾರ್ಖಾನೆ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಘಟಕ (ವಿಐಎಸ್ಎಲ್) ಮಾರ್ಚ್ 31ಕ್ಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ತಿಳಿದುಬಂದಿದೆ.
ವಿಐಎಸ್ಎಲ್ ಕಾರ್ಖಾನೆಯನ್ನು ಪುನರಾರಂಭಿಸಬೇಕೆಂದು ಹೋರಾಟ ನಡೆಯುತ್ತಿರುವ ಮಧ್ಯೆಯೂ ಸೈಲ್ ಮುಖ್ಯಸ್ಥರು ಕಾರ್ಖಾನೆ ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ನವದೆಹಲಿಯ ಕಾರ್ಪೊರೇಟ್ ಕಚೇರಿಯಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಾಂದ್ವಾನಿ ಸೇರಿದಂತೆ ಕಾರ್ಖಾನೆಯ ಆಡಳಿತ ಮಂಡಳಿ ಅಧಿಕಾರಿಗಳು ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಯಾವುದೇ ವಿಭಾಗಗಳಲ್ಲಿಯೂ ಉತ್ಪಾದನೆ ಮಾಡುವಂತಿಲ್ಲವೆಂದು ಆದೇಶ ಮಾಡಿದ್ದಾರೆ ಎಂದು ಹೇಳಲಾಗಿದೆ.