ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಜಟಾಪಟಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದು, ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಎಸ್ ಗೆ ಸೂಚಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶಾಂತ ತಮ್ಮಯ್ಯ, ಸಿಎಂ ಸಂಬಂಧಿ ಸೂರಿ ಪಾಯಲ್ ಅವರನ್ನು ಕೆ.ಎಸ್.ಪಿ.ಸಿ.ಬಿ ಸದಸ್ಯ ಹುದ್ದೆಯಿಂದ ವಜಾಗೊಳಿಸಿದ್ದರು. ಇದರ ಬೆನ್ನಲ್ಲೇ ಸೂರಿ ಪಾಯಲ್ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 17 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ಇದೇ ವಿಚಾರವಾಗಿ ಎಂಎಲ್ ಸಿ ರಮೇಶ್, ದೂರು ನೀಡಿದ್ದರು.
ದೂರನ್ನು ಆಧರಿಸಿ 17 ಕೋಟಿ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.