ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿದ್ದ ಮೀಟೂ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ. ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ನಟ ಅರ್ಜುನ್ ಸರ್ಜಾ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ನಟಿ ಶೃತಿ ಹರಿಹರನ್ ಆರೋಪಿಸಿದ್ದರು. ಅರ್ಜುನ್ ಸರ್ಜಾ ವಿರುದ್ಧ 2018ರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಿ ಸಿಗದ ಕಾರಣ ಇದೀಗ ಮೂರು ವರ್ಷದ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್ ಸಿಕ್ಕಂತಾಗಿದ್ದು, ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.