alex Certify BIG NEWS: ಮೀಸಲಾತಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ; ನೇರವಾಗಿ ಹೋರಾಟದಲ್ಲಿ ಭಾಗವಹಿಸಬೇಕೆಂದೇನೂ ಇಲ್ಲ ಎಂದ ಅಭಿನಯ ಚಕ್ರವರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೀಸಲಾತಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ; ನೇರವಾಗಿ ಹೋರಾಟದಲ್ಲಿ ಭಾಗವಹಿಸಬೇಕೆಂದೇನೂ ಇಲ್ಲ ಎಂದ ಅಭಿನಯ ಚಕ್ರವರ್ತಿ

ರಾಯಚೂರು: ವಾಲ್ಮೀಕಿ ಸಮುದಾಯದ ಮೀಸಲಾತಿಗಾಗಿ ಪ್ರಸನ್ನಾನಂದ ಪುರಿ ಸ್ವಾಮೀಜಿ ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ರಾಯಚೂರಿನ ಸಿರಿವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್, ನಾವು ಹೋರಾಟದಲ್ಲಿ ನೇರವಾಗಿ ಭಾಗಿಯಾಗಿಲ್ಲ ಎಂದ ಮಾತ್ರಕ್ಕೆ ಬೆಂಬಲ ನೀಡಿಲ್ಲ ಎಂದಲ್ಲ. ಈಗ ಕೆಲವು ದೇವಾಲಯಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಆಗ ದೇವರನ್ನು ನೆನೆದು ಮನೆಯಿಂದಲೆ ಕೈಮುಗಿಯುವುದಿಲ್ಲವೇ? ಹಾಗೇ ನೇರವಾಗಿ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದರೂ ಹೇಗೆ ಬೆಂಬಲ ನೀಡಬೇಕೊ ಹಾಗೆ ಬೆಂಬಲ ನೀಡುತ್ತೇವೆ ಎಂದರು.

Big News: ನರ್ಸ್ ಕೈಯಿಂದ ಜಾರಿ ಬಿದ್ದು ನವಜಾತ ಶಿಶು ಸಾವು; ಹುಟ್ಟುವಾಗಲೇ ಸತ್ತಿದೆ ಎಂಬ ಕತೆ ಕಟ್ಟಿದ ಆಸ್ಪತ್ರೆ ಅಧಿಕಾರಿಗಳು

ಆದರೆ ಈ ಬಗ್ಗೆ ಪ್ರಸನ್ನಾನಂದ ಪುರಿ ಸ್ವಾಮಿಜಿ ಮಾತನಾಡಿಲ್ಲ. ಆದರೆ ನಮ್ಮ ಬೆಂಬಲವಿದೆ ಎಂದು ಹೇಳಿದರು.

ವಾಲ್ಮೀಕಿ ಸಮುದಾಯಕ್ಕೆ ನೀಡಿರುವ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಪ್ರಸನ್ನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...