ಮುಂಗಾರು ಮಳೆ ಆರಂಭವಾಯಿತೆಂದರೆ ರೈತಾಪಿ ವರ್ಗದಲ್ಲಿ ಬಿತ್ತನೆಯ ಸಂಭ್ರಮ ಮನೆ ಮಾಡಿರುತ್ತದೆ. ನೀರಾವರಿ ಪ್ರದೇಶಗಳ ರೈತರು ಬೇಸಿಗೆಯಲ್ಲೂ ಬೆಳೆದರೆ ಬೆದ್ದಲು ಪ್ರದೇಶದ ರೈತರಿಗೆ ಬೆಳೆ ಬೆಳೆಯಲು ಮುಂಗಾರು ಮಳೆಯೇ ಆಧಾರ. ಹೀಗಾಗಿ ಮುಂಗಾರು ಮಳೆಯ ಕುರಿತು ಮಹತ್ವದ ಮಾಹಿತಿ ಇಲ್ಲಿದೆ.
ವಾಡಿಕೆಯಂತೆ ಪ್ರತಿವರ್ಷ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಆರಂಭವಾಗುತ್ತದೆ. ಆದರೆ ಸಂತಸದ ಸಂಗತಿಯೆಂದರೆ ಈ ಬಾರಿ ಜೂನ್ ತಿಂಗಳಿಗೂ ಮೊದಲು ಅಂದರೆ ಮೇ 20 ಅಥವಾ ಜೂನ್ 1ರ ಒಳಗಾಗಿ ಮುಂಗಾರು ಮಳೆ ಆರಂಭವಾಗುತ್ತದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ಬಾರಿ ಮುಂಗಾರು ಮಳೆ ಉತ್ತಮವಾಗಿರುತ್ತದೆ ಎನ್ನಲಾಗಿದ್ದು, ಹೀಗಾಗಿ ರೈತಾಪಿ ವರ್ಗದ ಮೊಗದಲ್ಲಿ ಮಂದಹಾಸ ಮೂಡಿದೆ. ರಸ ಗೊಬ್ಬರ ಬೆಲೆ ಏರಿಕೆಯ ಆತಂಕದಲ್ಲಿದ್ದ ರೈತರಿಗೆ ಕೇಂದ್ರ ಸರ್ಕಾರ ಸಹ ನೆಮ್ಮದಿ ನೀಡಿದ್ದು, ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸಿದೆ.