alex Certify BIG NEWS: ಮುಂದಿನ ನಡೆ ಬಗ್ಗೆ ಮಂಡ್ಯದಲ್ಲೇ ಹೇಳುತ್ತೇನೆ ಎಂದ ಸಂಸದೆ ಸುಮಲತಾ; ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ನಡೆ ಬಗ್ಗೆ ಮಂಡ್ಯದಲ್ಲೇ ಹೇಳುತ್ತೇನೆ ಎಂದ ಸಂಸದೆ ಸುಮಲತಾ; ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಇಂದು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಮಂಡ್ಯದಲ್ಲಿ ಸುಮಲತಾ ನಡೆಸಲಿರುವ ಸುದ್ದಿಗೋಷ್ಠಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಿರುವ ಸಂಸದೆ ಸುಮಲತಾ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ರಾಜಕೀಯದ ಮುಂದಿನ ನಡೆ ಬಗ್ಗೆ ಮಂಡ್ಯದಲ್ಲಿಯೇ ತಿಳಿಸುತ್ತೇನೆ. ಎಲ್ಲಾ ವಿಚಾರಗಳ ಬಗ್ಗೆಯೂ ಅಲ್ಲಿಯೇ ಹೇಳುತ್ತೇನೆ ಎಂದಿದ್ದಾರೆ.

ನನ್ನ ಜನ, ನನ್ನ ಜಿಲ್ಲೆಯಲ್ಲಿಯೇ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ. ಮಂಡ್ಯದಲ್ಲಿಯೇ ಮುಂದಿನ ತೀರ್ಮಾನ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡಿವುದು ಬಹುತೇಕ ಖಚಿತವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...