ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷದ ಜನವರಿ ವೇಳೆಗೆ ಶ್ರೀರಾಮ ವಿಗ್ರಹ ಸ್ಥಾಪನೆ ಮಾಡಲಾಗುತ್ತದೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟಿಯೂ ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಸೋಮವಾರದಂದು ನವದೆಹಲಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಪೂರ್ವಭಾವಿ ಕಾರ್ಯಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿದ್ದು, ಕಾಲಮಿತಿಯೊಳಗೆ ಪ್ರಾಣಪ್ರತಿಷ್ಠೆ ಹಾಗೂ ಪೂಜೆಗಳು ಆರಂಭವಾಗಲಿವೆ ಎಂದು ಶ್ರೀಗಳು ಹೇಳಿದ್ದಾರೆ.
ಎಲ್ಲ ರಾಜ್ಯಗಳು ಅಯೋಧ್ಯೆಯಲ್ಲಿ ಅತಿಥಿ ಗೃಹಗಳನ್ನು ನಿರ್ಮಿಸುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು. ಇದಕ್ಕಾಗಿ ಉತ್ತರಪ್ರದೇಶ ಸರ್ಕಾರ ಅಗತ್ಯ ಭೂಮಿಯನ್ನು ನೀಡಬೇಕು ಎಂದು ಶ್ರೀಗಳು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.