ಬೆಂಗಳೂರು; ರಾಜ್ಯದಲ್ಲಿ ಮುಂದಿನ 48 ಗಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಜುಲೈ 19ರ ಬಳಿಕ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನೈರುತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರ ಜೋರಾಗಲಿದೆ. ಮುಂದಿನ 48 ಗಂಟೆಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಜುಲೈ 19ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.