ಬೆಂಗಳೂರು: ಕರ್ನಾಟಕದಲ್ಲಿ ನಾವು ಚುನಾವಣೆಯನ್ನು ಎದುರು ನೋಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಕಡಿಮೆ ಅಂತರದಲ್ಲಿ ಗೆಲ್ಲುವ ಗುರಿ ಹೊಂದಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ’ಕೈ’ ನಾಯಕರಿಗೆ ತಾಕೀತು ಮಾಡಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಬೇಕು. ಕರ್ನಾಟಕದಲ್ಲಿ ಈ ಸ್ಥಾನ ಗೆಲ್ಲುವುದು ಕಷ್ಟವೇನಲ್ಲ. 150ಕ್ಕಿಂತ ಕಡಿಮೆ ಸಂಖ್ಯೆ ಬರಬಾರದು ಎಂದು ತಿಳಿಸಿದ್ದಾರೆ.
ಬೇಸಿಗೆಯಲ್ಲಿ ‘ಆರೋಗ್ಯ’ ಕಾಪಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್
ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ಸರಿಯಾದ ವಿಚಾರಗಳನ್ನು ಕೈಗೆತ್ತಿಕೊಂಡಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯ. 20 ವರ್ಷಗಳ ಹಿಂದೆ ಮಾಡಿದ್ದು ಈಗ ನಡೆಯಲ್ಲ, ಕಡಿಮೆ ಅಂತರದಲ್ಲಿ ಗೆಲ್ಲುವ ಉದ್ದೇಶದಿಂದ ಎಲೆಕ್ಷನ್ ನಲ್ಲಿ ಸ್ಪರ್ಧಿಸಬಾರದು. 150ಕ್ಕಿಂತ ಒಂದೇ ಒಂದು ನಂಬರ್ ಕೂಡ ಕಡಿಮೆಯಾಗಬಾರದು. ಕಾಂಗ್ರೆಸ್ ಸರ್ಕಾರ ಬಂದರೆ ಕಾರ್ಯಕರ್ತರಿಗೂ ಅಧಿಕಾರ ನೀಡುವುದಾಗಿ ಭರವಸೆ ನೀಡಿದರು.