ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಖಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹಲವು ಕ್ಷೇತ್ರಗಳ ಅಭಿಮಾನಿಗಳು ಮನವಿ ಮಾಡುತ್ತಿದ್ದು, ಡಿಸೆಂಬರ್ ಮೊದಲ ವಾರದ ಹೊತ್ತಿಗೆ ಯಾವ ಕ್ಷೇತ್ರ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಯಾವುದಾದರು ಒಂದು ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.