ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸಿದ್ದ ದೇಶದ ಪ್ರಥಮ ರ್ಯಾಪಿಡ್ ರಸ್ತೆ ಬಿರುಕು ಬಿಟ್ಟಿದ್ದು, ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರ್ಯಾಪಿಡ್ ರಸ್ತೆಯನ್ನು ಉದ್ಘಾಟಿಸಿ ಒಂದು ತಿಂಗಳಿನಲ್ಲಿಯೇ ರಸ್ತೆ ಬಿರುಕು ಬಿಟ್ಟಿದೆ. ಬೆಂಗಳೂರಿನ ಹಳೇ ಮದ್ರಾಸ್ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ರ್ಯಾಪಿಡ್ ರಸ್ತೆಯಲ್ಲಿ ಬಿರುಕು ಕಂಡುಬಂದಿದೆ.
ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಬಿಬಿಎಂಪಿ ಈ ರಸ್ತೆ ನಿರ್ಮಿಸಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ಈಗ ರಸ್ತೆ ಸಂಪೂರ್ಣ ಬಿರುಕು ಬಿಟ್ಟಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.