
ವಿಜಯಪುರ: ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ರಾಜ್ಯದ ಇತಿಹಾಸದಲಿಯ್ಯೇ ಅತಿ ಹೆಚ್ಚು ಸಾಲ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ನೀಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರು ಪ್ರವಾಸ ಮಾಡುತ್ತಿರುವ ಭಾಗದ ಶಾಸಕರನ್ನು ಮೊದಲು ಗಟ್ಟಿಯಾಗಿ ಹಿಡಿದುಕೊಳ್ಳಲಿ. ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ ಎಂದಷ್ಟೇ ನಾನು ಸಲಹೆ ನೀಡುತ್ತೇನೆ ಎಂದು ಹೇಳಿದರು.