alex Certify BIG NEWS: ಮುಖ್ಯಮಂತ್ರಿ ಬೊಮ್ಮಾಯಿಗೆ ಕಿಚ್ಚ ಸುದೀಪ್ ಬೆಂಬಲ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಖ್ಯಮಂತ್ರಿ ಬೊಮ್ಮಾಯಿಗೆ ಕಿಚ್ಚ ಸುದೀಪ್ ಬೆಂಬಲ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿರುವ ವಿಚಾರವಾಗಿ ಇದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕಲಾವಿದರು ತಮಗೆ ಬೇಕಾದವರನ್ನು ಚುನಾವಣೆಯಲ್ಲಿ ಬೆಂಬಲಿಸುತ್ತಾರೆ. ಸರ್ಕಾರ ಸಿನಿಮಾ ನಟರ ಮೇಲೆ ಒತ್ತಡ ಹಾಕಿರಬಹುದು ಅಥವಾ ನಟರ ಬಳಿ ಮನವಿ ಮಾಡಿಕೊಂಡಿರಬಹುದು ಎಂದು ಹೇಳಿದರು.

ಇದೇ ವೇಳೆ ಈ ಹಿಂದೆ ನಟ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿದ್ದ ವಿಷಯವಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನಾನು ಹಾಗೂ ಸುದೀಪ್ ಹಳೇ ಸ್ನೇಹಿತರು. ರಾಜಕೀಯ ಉದ್ದೇಶದಿಂದ ನಾನು ಸುದೀಪ್ ಅವರನ್ನು ಭೇಟಿಯಾಗಿಲ್ಲ. ರಾಜಕೀಯ ಚರ್ಚೆ ಕೂಡ ನಡೆದಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...