ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯ ಕಸರತ್ತು ಮುಂದುವರೆದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ.
ಕೋಲಾರ ಜಿಲ್ಲಾ ಉಸ್ತುವಾರಿ ಮೇಲೆ ಕೆ.ಹೆಚ್. ಮುನಿಯಪ್ಪ ಕಣ್ಣಿಟ್ಟಿದ್ದಾರೆ. ಎಡಗೈ ಸಮುದಾಯದ ಹಿರಿಯ ನಾಯಕ ಕೋಟಾದಲ್ಲಿ ಸಚಿವ ಸ್ಥಾನ ಬಹುತೇಕ ಖಚಿತ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ತಮಗೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಈ ಮೂಲಕ ಪಕ್ಷದಲ್ಲೇ ಇರುವ ಎದುರಾಳಿಗಳಿಗೆ ಟಕ್ಕರ್ ಕೊಡಲು ಸಿದ್ಧತೆ ನಡೆಸಿದ್ದಾರೆ.