ಮಂಡ್ಯ: ಶ್ರೀರಂಗಪಟ್ಟಣದ ದೇವಾಲಯ ಜಾಮಿಯಾ ಮಸೀದಿಯಾಗಿ ಪರಿವರ್ತನೆಯಾಗಿದೆ ಎಂದು ಹೇಳುವ ಮೂಲಕ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾಳಿಸ್ವಾಮಿಗೆ ನಿರ್ಬಂಧ ವಿಧಿಸಬೇಕು ಎಂದು ಮಂಡ್ಯ ಜಿಲ್ಲೆಯಲ್ಲಿ ಹೋರಾಟಗಾರರು ಆಗ್ರಹಿಸಿದ್ದಾರೆ.
ಪ್ರಮೋದ್ ಮುತಾಲಿಕ್ ಹಾಗೂ ಕಾಳಿಸ್ವಾಮಿ ಸಮಾಜದಲ್ಲಿ ಶಾಂತಿಯ ವಾತಾವರಣವನ್ನು ಕದಡಲು ಯತ್ನಿಸುತ್ತಿದ್ದಾರೆ. ಅನಗತ್ಯವಾಗಿ ವಿವಾದಗಳನ್ನು ಸೃಷ್ಟಿಸಿ ವೈಮನಸ್ಯ ಹರಡುವಂತೆ ಮಾಡುತ್ತಿದ್ದಾರೆ. ಇಬ್ಬರೂ ಮಂಡ್ಯಕ್ಕೆ ಕಾಲಿಡದಂತೆ ನಿಷೇಧ ಹೇರಬೇಕು ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹೋರಾಟಗಾರರು ಮನವಿ ಮಾಡಿದ್ದಾರೆ.
ಈ ಮಧ್ಯೆ ಧಾರವಾಡದಲ್ಲಿ ಮಾತನಾಡಿರುವ ಪ್ರಮೋದ್ ಮುತಾಲಿಕ್ ಶ್ರೀರಂಗಪಟ್ಟಣದ ಆಂಜನೇಯ ದೇವಸ್ಥಾನ ಮಸೀದಿಯಾಗಿ ಪರಿವರ್ತನೆಯಾಗಿದೆ. ಅದು ಪ್ರಾಚ್ಯ ಇಲಾಖೆ ಕಟ್ಟಡ. ಅಲ್ಲಿ ಬೋರ್ಡ್ ಕೂಡ ಇದೆ. ಅಲ್ಲಿ ಆಂಜನೇಯ ದೇವಸ್ಥಾನ ಪ್ರತಿಷ್ಠಾಪನೆ ಮಾಡಬೇಕು ಎಂಬ ಒತ್ತಡ ಕೂಡಾ ಬಂದಿದೆ. ಈ ವಾದ ನೂರಕ್ಕೆ ನೂರು ನಿಜ ಎಂದು ಹೇಳಿದ್ದಾರೆ.