alex Certify BIG NEWS: ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ; ಖಚಿತ ಪಡಿಸಿದ ಮಾಜಿ ಸಿಎಂ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ; ಖಚಿತ ಪಡಿಸಿದ ಮಾಜಿ ಸಿಎಂ BSY

ಶಿವಮೊಗ್ಗ: ಮಾಜಿ ಸಂಸದ ಮುದ್ದಹನುಮೇಗೌಡ ಇತ್ತೀಚೆಗೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಈ ವಿಚಾರವನ್ನು ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖಚಿತ ಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಮುದ್ದಹನುಮೇಗೌಡ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಅವರು ನನ್ನ ಜೊತೆ ಚರ್ಚೆ ನಡೆಸಿದ್ದು, ಬಿಜೆಪಿಗೆ ಬರುವುದಾಗಿ ಹೇಳಿದ್ದಾರೆ. ಮುದ್ದಹನುಮೇಗೌಡ ಮಾತ್ರವಲ್ಲ ಇನ್ನೂ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದರು.

ನಿನ್ನೆ ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಇನ್ನಷ್ಟು ಶಕ್ತಿ ತಂದಿದೆ. ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿ ಪ್ರಧಾನಿ ಮೋದಿ ಅವರನ್ನು ಶಿವಮೊಗ್ಗಕ್ಕೂ ಕರೆ ತರುವ ಚಿಂತನೆ ನಡೆಸಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...