ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಮತ್ತೆ ನ್ಯಾಯಾಂಗ ಬಂಧನವೇ ಗತಿಯಾಗಿದೆ.
ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಚಿತ್ರದುರ್ಗದ ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಅ.10ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮುರುಘಾಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದ ಶ್ರೀಗಳಿಗೆ ಇದೀಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ಲೇಡಿ ವಾರ್ಡನ್ ಗೂ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.