ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು. ಇದು ಮಠದವರೇ ಯಾರೋ ಮಾಡಿರುವ ಷಡ್ಯಂತ್ರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಮುರುಘಾಶ್ರೀಗಳ ವಿರುದ್ಧದ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ಶ್ರೀಗಳು ಆರೋಪ ಮುಕ್ತರಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ನಾಡಿನ ಜನ ಶ್ರೀಗಳ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಅಂತಹ ವ್ಯಕ್ತಿಗಳ ಮೇಲೆ ಆರೋಪ ಮಾಡಿರುವುದು ಸರಿಯಲ್ಲ. ಇದರ ಹಿಂದೆ ಯಾರ ಯಾರ ಕೈವಾಡವಿದೆ ಎಂಬುದು ತನಿಖೆಯಿಂದ ಸಧ್ಯದಲ್ಲೇ ಗೊತ್ತಾಗಲಿದೆ. ಶ್ರೀಗಳು ತಪ್ಪು ಮಾಡಿಲ್ಲ ಎಂಬುದು ನೂರಕ್ಕೆ ನೂರರಷ್ಟು ಸಾಬೀತಾಗುತ್ತೆ. ಮುಂದೆ ಅವರ ಮೇಲೆ ಗೌರವ 10 ಪಟ್ಟು ಹೆಚ್ಚಾಗುತ್ತೆ ಎಂದು ಹೇಳಿದರು.