ಚಿತ್ರದುರ್ಗ: ಮುರುಘಾಶ್ರೀಗಳನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್ 164 ಅನ್ವಯ ಸಂತ್ರಸ್ತ ಬಾಲಕಿಯರು ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಲು ಜಿಲ್ಲಾ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಹೇಳಿಕೆ ದಾಖಲಿಸಿದ್ದಾರೆ.
ಈ ನಡುವೆ ಕೋರ್ಟ್ ಎದುರು ಸಾರ್ವಜನಿಕರು ಬೇಟಿ ಬಚಾವೋ, ಬೇಟಿ ಪಡಾವೋ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದು, ಮುರುಘಾಶ್ರೀಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಸ್ಥಳದಿಂದ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.