alex Certify BIG NEWS: ಮುರುಘಾಶ್ರೀಗಳ ವಿರುದ್ಧ ಎರಡು ಕೇಸ್ ದಾಖಲು; ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀಗಳ ವಿರುದ್ಧ ಎರಡು ಕೇಸ್ ದಾಖಲು; ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದ ಸಿಎಂ

ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುರುಘಾಶ್ರೀಗಳ ವಿರುದ್ಧ ಪೊಲೀಸರು 2 ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೋ ಕೇಸ್ ಹಾಗೂ ಕಿಡ್ನಾಪ್ ಕೇಸ್ ದಾಖಲಿಸಿದ್ದಾರೆ. ತನಿಖೆಯ ದೃಷ್ಟಿಯಿಂದ ಮಾತನಾಡುವುದು ಸರಿಯಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ. ಸತ್ಯಾಂಶ ಹೊರಬರಲಿದೆ ಎಂದರು.

ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿವೆ. ಇಂದು ಸಂಜೆ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಯಾವ ಜಿಲ್ಲೆಗಳಲ್ಲಿ ಎಷ್ಟು ಹಾನಿ ಎಂಬ ಮಾಹಿ ಪಡೆದು ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಪರಿಹಾರ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...