alex Certify BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಆಶ್ಚರ್ಯ ತಂದ ವಿಚಾರವಲ್ಲ ಎಂದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಆಶ್ಚರ್ಯ ತಂದ ವಿಚಾರವಲ್ಲ ಎಂದ HDK

ಬಿಜೆಪಿಗೆ ಬೆಂಬಲ ನೀಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ: ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ | HD Kumaraswamy tweets on MLC Election BJP Congress JDS Karnataka Politics | TV9 Kannada

ರಾಮನಗರ: ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ನನಗೆ ಆಶ್ಚರ್ಯ ತಂದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ವಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರದ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಇದು ನನಗೆ ಆಶ್ಚರ್ಯ ತಂದ ವಿಚಾರವೇನಲ್ಲ. ಕಳೆದ 5-6 ತಿಂಗಳಿಂದ ಹಲವರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಹೊಸನಗರ ಶ್ರೀಗಳ ವಿರುದ್ಧವೂ ಆರೋಪಗಳು ಕೇಳಿಬಂದಿತ್ತು. ಆದರೆ ಇದು ಧಾರ್ಮಿಕ ಕ್ಷೇತ್ರಗಳ ಮೇಲೆ ಬೇರೆ ರೀತಿ ಪರಿಣಾಮವನ್ನುಂಟು ಮಾಡಬಾರದು ಎಂಬುದು ನನ್ನ ಅಭಿಪ್ರಾಯ ಎಂದರು.

ಇಂತಹ ಆರೋಪಗಳಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದು. ನಮ್ಮ ಧಾರ್ಮಿಕ ಕ್ಷೇತ್ರಗಳ ಮೇಲೆ ಬೇರೆ ರೀತಿ ಪರಿಣಾಮ ಬೀರಬಾರದು. ಕಾನೂನು ಬಾಹಿರ ಚಟುವಟಿಕೆ ನಡೆದಿದ್ದರೆ ಅಂತವರ ವಿರುದ್ಧ ಕ್ರಮಕ್ಕೆ ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...