ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಮುಂದೂಡಿದೆ.
ಇಂದು ಮುರುಘಾಶ್ರೀಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಪೊಲೀಸ್ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಪೊಲೀಸರು ಮನವಿ ಮಾಡಿದ್ದರು. ಅದರಂತೆ ಕೋರ್ಟ್ ಮುರುಘಾಶ್ರೀಗಳನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಇದೇ ವೇಳೆ ಮುರಿಘಾಶ್ರೀಗಳು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಸೆ.7ಕ್ಕೆ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿದೆ.