alex Certify BIG NEWS: ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಜಿಲ್ಲಾ 2ನೇ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾಶ್ರೀ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ಬಾಲಕಿಯರು ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ಪ್ರಸ್ತುತ ಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ನಡುವೆ ಮುರುಘಾಶ್ರೀಗಳು ಜಾಮೀನಿಗಾಗಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆ ನಾಳೆಗೆ ಮುಂದೂಡಿದೆ. ಇದೆ ವೇಳೆ ಪ್ರಕರಣದ ಬಾಲ ಆರೋಪಿ ಸೇರಿ ಪರಮಶಿವಯ್ಯ ಅರ್ಜಿಯ ವಿಚಾರಣೆಯೂ ಮುಂದೂಡಲ್ಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...