ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ನ್ಯಾಯಾಲಯ ಮತ್ತೆ ಮುಂದೂಡಿದೆ.
ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ಅವರು ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ವಾರ್ಡನ್ ರಶ್ಮಿ ಜಾಮೀನು ಅರ್ಜಿ ವಿಚಾರಣೆಯನ್ನು ಕೂಡ ನಾಳೆಗೆ ಮುಂದೂಡಲಾಗಿದೆ.