ಬೆಂಗಳೂರು: ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿ ಅವರು ಬಂಧನಕ್ಕೀಡಾಗಿರುವ ಹಿನ್ನೆಲೆಯಲ್ಲಿ ಪೀಠತ್ಯಾಗ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವ ಶಾಸಕ ಯತ್ನಾಳ್, ಮುರುಘಾಶ್ರೀಗಳಿಗೆ ಪೀಠತ್ಯಾಗಕ್ಕೆ ಸೂಚಿಸಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಮುರುಘಾಶರಣರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೇ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದ್ದು, ಪ್ರಕರಣದ ಬಗ್ಗೆ ಹಾಗೂ ಮಠದ ಆಸ್ತಿ ಬಗ್ಗೆಯೂ ನ್ಯಾಯಾಲಯ ಕೂಲಂಕುಷ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.