alex Certify BIG NEWS: ಮುರುಘಾಶ್ರೀ ಪ್ರಕರಣ; ಮೂರನೇ ಆರೋಪಿ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀ ಪ್ರಕರಣ; ಮೂರನೇ ಆರೋಪಿ ಬಂಧನ

ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಮುರುಘಾಶ್ರೀ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಮೂರನೇ ಆರೋಪಿ ಬಸವಾದಿತ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮಧ್ಯಾಹ್ನ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಪೊಲೀಸ್ ವಶದಲ್ಲಿರುವ ಬಸವಾದಿತ್ಯ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಮುರುಘಾಶ್ರೀ ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕೇಸ್ ನಡಿ ಪ್ರಕರಣ ದಾಖಲಾಗಿತ್ತು. ಮುರುಘಾಶ್ರೀ, ವಾರ್ಡನ್ ರಶ್ಮಿ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದ್ದು, ಇದೀಗ ಮೂರನೇ ಆರೋಪಿ ಬಸವಾದಿತ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...