alex Certify BIG NEWS: ಮುರುಘಾಶ್ರೀ ವಿರುದ್ಧ 2ನೇ ಪೋಕ್ಸೋ ಪ್ರಕರಣ; ಸಂತ್ರಸ್ತ ಬಾಲಕಿಯರನ್ನು ಕರೆತಂದು ಮಠದಲ್ಲಿ ಪೊಲೀಸರ ಸ್ಥಳ ಮಹಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀ ವಿರುದ್ಧ 2ನೇ ಪೋಕ್ಸೋ ಪ್ರಕರಣ; ಸಂತ್ರಸ್ತ ಬಾಲಕಿಯರನ್ನು ಕರೆತಂದು ಮಠದಲ್ಲಿ ಪೊಲೀಸರ ಸ್ಥಳ ಮಹಜರು

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಚಿತ್ರದುರ್ಗ ಮುರುಘಾಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಸಂತ್ರಸ್ತ ಬಾಲಕಿಯರು ಹಾಗೂ ಮಕ್ಕಳ ತಾಯಿಯನ್ನು ಮೈಸೂರಿನಿಂದ ಕರೆ ತಂದಿರುವ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು ಮುರುಘಾಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ಸ್ಥಳ ಮಹಜರು ನಡೆದಿದೆ.

ಅ.13ರಂದು ಮುರುಘಾಶ್ರೀ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅ.14ರಂದು ನಜರಾಬಾದ್ ಠಾಣೆ ಪೊಲೀಸರು ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಿದ್ದರು.

ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ಮೊದಲ ಕೇಸ್ ಗೆ ಸಂಬಂಧಿಸಿದಂತೆ ನಿನ್ನೆ ಚಿತ್ರದುರ್ಗ ಪೊಲೀಸರು ಶ್ರೀಗಳು ಸೇರಿ ಮೂವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...