ಚಿತ್ರದುರ್ಗ: ಮುರುಘಾ ಮಠದಲ್ಲಿ ನಾಲ್ಕು ವರ್ಷದ ಅಪರಿಚಿತ ಹೆಣ್ಣು ಮಗುವೊಂದು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮುರುಘಾ ಮಠದ ವಸತಿ ಶಾಲೆಯಲ್ಲಿ ನಾಲ್ಕು ವರ್ಷದ ಮಗು ಪತ್ತೆಯಾಗಿದ್ದು, ಮಗುವಿನ ಪೋಷಕರ ಬಗ್ಗೆ ಯಾವುದೇ ವಿವರಗಳೂ ಇಲ್ಲ. ಮುರುಘಾ ಮಠದಲ್ಲಿ ಹಲವು ಮಕ್ಕಳನ್ನು ಅನಧಿಕೃತವಾಗಿ ಇರಿಸಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ವಸತಿ ಶಾಲೆಯಲ್ಲಿದ್ದ ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಇನ್ನೊಂದೆಡೆ ಮಠದ ಆವರಣದಲ್ಲಿರುವ ವಸತಿ ಶಾಲೆಯಲ್ಲಿ ಪತ್ತೆಯಾಗಿರುವ ನಾಲ್ಕು ವರ್ಷದ ಚಿಗುರು ಎಂಬ ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಪತ್ರಿಕಾ ಜಾಹೀರಾತನ್ನು ಹೊರಡಿಸಲಾಗಿದೆ.