alex Certify BIG NEWS: ಮುರುಘಾ ಶ್ರೀಗಳಿಗೆ ಮತ್ತಷ್ಟು ಸಂಕಷ್ಟ; ಎರಡನೇ ಪೋಕ್ಸೋ ಪ್ರಕರಣದಲ್ಲೂ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀಗಳಿಗೆ ಮತ್ತಷ್ಟು ಸಂಕಷ್ಟ; ಎರಡನೇ ಪೋಕ್ಸೋ ಪ್ರಕರಣದಲ್ಲೂ ವಿಚಾರಣೆ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಗಾಗಲೇ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಅವರನ್ನು ಪೀಠದಿಂದ ಕೆಳಗಿಳಿಸಬೇಕು ಎಂಬ ಕೂಗು ಕೇಳಿ ಬರುತ್ತಿರುವ ಮಧ್ಯೆ, ಶ್ರೀಗಳ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆ ನಡೆಯಲಿದೆ.

ಎರಡನೇ ಪ್ರಕರಣದಲ್ಲಿ ಲೈಂಗಿಕ ಕಿರುಕುಳಕ್ಕೊಳಗಾಗಿರುವ ಬಾಲಕಿಯರ ತಾಯಿ ಒಡನಾಡಿ ಸಂಸ್ಥೆಯ ಸಹಕಾರದಿಂದ ಮೈಸೂರಿನಲ್ಲಿ ದೂರು ಸಲ್ಲಿಸಿದ್ದು, ಈ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿದೆ. ಹೀಗಾಗಿ ಬಾಲಕಿಯರನ್ನು ಚಿತ್ರದುರ್ಗಕ್ಕೆ ಕರೆತಂದು ಸಿಆರ್ಪಿಸಿ 64ರ ಅಡಿ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ.

ಆ ಬಳಿಕ ಜೈಲಿನಲ್ಲಿರುವ ಶಿವಮೂರ್ತಿ ಶರಣರನ್ನು ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು ತಮ್ಮ ವಶಕ್ಕೆ ಪಡೆದ ಬಳಿಕ ಮತ್ತೊಮ್ಮೆ ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಈಗ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಬಾಲಕಿಯರನ್ನು ಮಠಕ್ಕೆ ಕರೆತಂದು ಸ್ಥಳ ಮಹಜರು ಮಾಡಿಸುವ ಸಾಧ್ಯತೆಯೂ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...