ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಸ್.ಕೆ.ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೆ ಜಾಮೀನು ಮಂಜೂರಾಗಿದೆ.
ಚಿತ್ರದುರ್ಗದ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಲಯ ಸೌಭಾಗ್ಯ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಡಿಸೆಂಬರ್ 16ರಂದು ಸೌಭಾಗ್ಯ ಅವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಸೌಭಾಗ್ಯ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಪತ್ನಿ. ಮುರುಘಾ ಶ್ರೀಗಳ ವಿರುದ್ಧ ದಂಪತಿ ಪಿತೂರಿ ನಡೆಸಿದ ಆರೋಪ ಕೇಳಿಬಂದಿತ್ತು.