ಲಖನೌ: ಉತ್ತರ ಪ್ರದೇಶ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ 82 ವರ್ಷದ ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಇಂದು ಬೆಳಿಗ್ಗೆಯಿಂದ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ ಮುಲಾಯಂ ಸಿಂಗ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಪುತ್ರ ಅಖಿಲೇಶ್ ಯಾದವ್ ದೆಹಲಿಯಿಂದ ಗುರುಗಾಂವ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ ಎಂದು ತಿಳಿದುಬಂದಿದೆ.