ಬೆಂಗಳೂರು: ಮಳೆ, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ. ಮುಳುಗಡೆ ಭೀತಿಯಲ್ಲಿರುವ ಹಳ್ಳಿಗಳ ಜನರ ಸ್ಥಳಾಂತರಕ್ಕೆ ಯೋಜನೆ ರೂಪಿಸಲಾಗಿದೆ. ಜನರು ಆತಂಕಕ್ಕೀಡಾಗುವ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮದುವೆ ಮುಗಿದ ಮರುಕ್ಷಣವೇ ವರ ಮಾಡಿದ್ದಾನೆ ಈ ಕೆಲಸ…!
20 ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಈ ಬಾರಿ ರಾಜ್ಯಕ್ಕೆ ಮುಂಗಾರು ಬೇಗನೇ ಆರಂಭವಾಗಿದೆ. ಬಿತ್ತನೆ ಕಾರ್ಯಗಳು ಶುರುವಾಗಿವೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿಯುಂಟಾಗಿದೆ. ವಿಶೇಷ ಹೆಲಿಕಾಪ್ಟರ್ ಹಾಗೂ ಎನ್ ಡಿ ಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಯಾವ ಹಳ್ಳಿಗಳು ಮುಳುಗುವ ಭೀತಿಯಲ್ಲಿವೆಯೋ ಅಂತಹ ಹಳ್ಳಿಗಳ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ.
SHOCKING NEWS: 6-8 ವಾರಗಳಲ್ಲಿ ದೇಶಕ್ಕೆ ಅಪ್ಪಳಿಸಲಿದೆ ಕೊರೊನಾ 3ನೇ ಅಲೆ; ಏಮ್ಸ್ ಮುಖ್ಯಸ್ಥರ ಎಚ್ಚರಿಕೆ
ಮಳೆ ಹಾನಿ, ಪ್ರವಾಹದಿಂದಾಗುವ ಅನಾಹುತಗಳನ್ನು ತಪ್ಪಿಸಬೇಕು. ಜನರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.