ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಗೂಂಡಾಗಳಿಗೆ ಇನ್ನೂ ಬುದ್ದಿ ಬಂದಂತೆ ಕಾಣುತ್ತಿಲ್ಲ. ಹೀಗಾಗಿಯೇ ನಗರದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಪ್ರಕಾಶ್ ಎಂಬ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಹರ್ಷನ ಕುಟುಂಬಕ್ಕೆ ಬೆದರಿಕೆ ಹಾಕಿರುವಂತೆ ಪ್ರತಿಕ್ರಿಯಿಸಿ, ಪಿಎಫ್ಐ ಇನ್ನೂ ಇದೆಯಾ ಎಂಬುದನ್ನು ಪೊಲೀಸರು ಪತ್ತೆಹಚ್ಚಬೇಕಿದೆ ಎಂದಿದ್ದಾರೆ.