ಬೆಂಗಳೂರು: ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ತೀವ್ರ ವಿದಾದಕ್ಕೆ ಕಾರಣವಾದ ಬೆನ್ನಲ್ಲೇ ಮುಜರಾಯಿ ಹಾಗೂ ಹಜ್, ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದು, ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.
ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಎಂಬುದು ಸುಳ್ಳು. ಈ ವಿಚಾರದ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಸರ್ಕಾರದ ಮುಂದೆ ಯಾವುದೇ ಕಡತಗಳು ಇಲ್ಲ. ಇಂತಹ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ತಿಳಿಸಿದ್ದಾರೆ.
ವಕ್ಫ್ ಬೋರ್ಡ್ ನ ಅಧ್ಯಕ್ಷರ ಹೇಳಿಕೆಗಳು ಅವರ ವೈಯಕ್ತಿಕ ಹೇಳಿಕೆ. ಈಗಾಗಲೇ ನಾನು ಅಧ್ಯಕ್ಷರ ಜೊತೆಯೂ ಮಾತನಾಡಿದ್ದೇನೆ. ವಿವಾದ, ಚರ್ಚೆಗಳಿಗೆ ಸ್ಪಷ್ಟ ಉತ್ತರ ನೀಡುವಂತೆ ಸೂಚಿಸಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.