ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ವಕ್ಫ್ ಮಂಡಳಿ ಮುಂದಾಗಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಚರ್ಚೆ ಹಾಗೂ ಊಹಾಪೋಹಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಿಸುವ ವಿಚಾರದ ಬಗ್ಗೆ ಯಾವುದೇ ಚರ್ಚೆಯೇ ಆಗಿಲ್ಲ, ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು ಎಂದು ಹೇಳಿದ್ದಾರೆ.
ಈ ಮೂಲಕ ಸರ್ಕಾರ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಹೊರಟಿದೆ ಎಂಬ ಸುದ್ದಿಗೆ ತೆರೆ ಎಳೆದಿದ್ದಾರೆ.