alex Certify BIG NEWS: ಮೂಢನಂಬಿಕೆಗಳನ್ನು ನಾನು ನಂಬಲ್ಲ; ಚಾಮರಾಜನಗರಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೂಢನಂಬಿಕೆಗಳನ್ನು ನಾನು ನಂಬಲ್ಲ; ಚಾಮರಾಜನಗರಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

ಚಾಮರಾಜನಗರ: ಮೂಢನಂಬಿಕೆಗಳಿಗೆ ಸೆಡ್ಡು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಇಂದು ಚಾಮರಾಜ ನಗರಕ್ಕೆ ಭೇಟಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆ ಭೇಟಿಗೂ ಮೊದಲು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಚಾಮರಾಜನಗರ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಮುಖ್ಯಮಂತ್ರಿಯಾದ ಬಳಿಕ 3 ಬಾರಿ ಚಾಮರಾಜ ನಗರಕ್ಕೆ ಭೇಟಿಕೊಟ್ಟಿದ್ದೇನೆ. ರಾಜ್ಯದ 31 ಜಿಲ್ಲೆಗಳಲ್ಲಿ ಚಾಮರಾಜನಗರ ಜಿಲ್ಲೆಯೂ ಒಂದು ಎಂದರು.

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಮೂಢನಂಬಿಕೆಗಳನ್ನು ನಾನು ನಂಬಲ್ಲ. ಅವೆಲ್ಲ ನನ್ನ ತಲೆಯಲ್ಲಿ ಇಲ್ಲ. ಎಲ್ಲಾ ಜಿಲ್ಲೆಗಳಂತೆ ಚಾಮರಾಜನಗರ ಜಿಲ್ಲೆಯೂ ಒಂದು. ಹಾಗಾಗಿ ಜಿಲ್ಲೆಯನ್ನು ಅಭಿವೃದ್ಧಿ ಮಾಡಬೇಕು ಎಂಬುದಷ್ಟೇ ನನ್ನ ಅಭಿಲಾಷೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...