ವಿಜಯನಗರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮೂವರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಿಸಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಶಾಲೆಗೆ ರಜೆ ಘೋಷಿಸಲಾಗಿದೆ.
ಸೋಂಕಿತ ಮೂವರು ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲಾಗಿದೆ.