alex Certify BIG NEWS: ಮೂವರು ಶಾಲಾ ಬಾಲಕಿಯರು ಏಕಾಏಕಿ ನಾಪತ್ತೆ; ಕಂಗಾಲಾದ ಪೋಷಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೂವರು ಶಾಲಾ ಬಾಲಕಿಯರು ಏಕಾಏಕಿ ನಾಪತ್ತೆ; ಕಂಗಾಲಾದ ಪೋಷಕರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

15 ವರ್ಷದ ಶಕ್ತೀಶ್ವರಿ, 16 ವರ್ಷದ ಮರುಣಿಕಾ ಹಾಗೂ 15 ವರ್ಷದ ನಂದಿನಿ ನಾಪತ್ತೆಯಾಗಿರುವ ವಿದ್ಯಾರ್ಥಿನಿಯರು. ಮೂವರು ಬಾಲಕಿಯರು ಸೆಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲಾ ಮಕ್ಕಳಾಗಿದ್ದು, ಸೆ.6ರಂದು ಶಾಲೆಯಿಂದಲೇ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಕ್ಕಳ ಬಗ್ಗೆ ಕೇಳಿದರೆ ಶಾಲಾ ಆಡಳಿತ ಮಂಡಳಿ ಸ್ಪಷ್ಟವಾಗಿ ತಿಳಿಸುತ್ತಿಲ್ಲ. ಮನೆಯಲ್ಲಿ ಸಮಸ್ಯೆ ಹಾಗಾಗಿ ಮನೆ ಬಿಟ್ಟು ಹೋಗಿದ್ದಾರೆ ಎಂದು ಹೇಳುತ್ತಿದ್ದಾರೆ. ಮಕ್ಕಳು ಕಾಣೆಯಾಗಿರುವುದರಿಂದ ಆತಂಕಗೊಂಡ ಪೋಷಕರು ಶಾಲಾ ಅಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...