ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ ಹಾಗೂ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ತಾಯಿ ಹಾಗೂ ಮಗ ಇಬ್ಬರು ಸಾವನ್ನಪ್ಪಿದ್ದರು. ಘಟನೆ ನಡೆದು 5 ತಿಂಗಳ ಬಳಿಕ ಪೊಲೀಸರು ಇದೀಗ 1100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಚಾರ್ಜ್ ಶೀಟ್ ನಲ್ಲಿ 11 ಅಧಿಕಾರಿಗಳ ಮೇಲೆ ದೋಷಾರೋಪ ಮಾಡಲಾಗಿದೆ. ಅಧಿಕಾರಿಗಳ ಲೋಪ ಹಾಗೂ ಮೆಟ್ರೋ ಪಿಲ್ಲರ್ ನಿರ್ಮಾಣದ ವೇಳೆ ಕೈಗೊಂಡಿರುವ ಸುರಕ್ಷತಾ ವೈಫಲ್ಯದ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.