ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆತಂಕ ಆರಂಭವಾಗಿದ್ದು, ಮಾಸ್ಕ್ ಧರಿಸಿದವರಿಗೆ ಮಾತ್ರ ಮೆಟ್ರೋ ನಿಲ್ದಾಣ, ಹಾಗೂ ಮೆಟ್ರೋ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
ಚೀನಾ, ಜಪಾನ್, ಅಮೇರಿಕಾ, ಕೊರಿಯಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ರಾಜಧಾನಿಯಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ಪ್ರವೇಶ ನಿರಾಕರಿಸುತ್ತಿದ್ದಾರೆ. ಹೋಗಾಗಿ ಮೆಟ್ರೋ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯವಾಗಿದೆ. ಇನ್ನೊಂದೆಡೆ ಬಿಬಿಎಂಪಿ ಮಾರ್ಷಲ್ ಗಳು ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.