ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ 2ನೇ ಜೆ ಎಂ ಎಫ್ ಸಿ ಕೋರ್ಟ್ ತೀರ್ಪು ನೀಡಿದೆ.
ಬರೋಬ್ಬರಿ 6 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳಾದ ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬುವವರಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ದಂಡ ವಿಧಿಸಿ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ತೀರ್ಪು ನೀಡಿದ್ದಾರೆ.
ದೇಶದಲ್ಲಿ ಹೆಚ್ಚಿದ ‘ಆರ್ ಫ್ಯಾಕ್ಟರ್’: ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ……!
ಮೆಣಸೆಯಲ್ಲಿ 2015 ಏಪ್ರಿಲ್ 18ರಂದು ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿತ್ತು.