ನವದೆಹಲಿ: ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 25ಕ್ಕೆ ಮುಂದೂಡಿದೆ.
ಎನ್ ಜಿ ಟಿ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಖಾನ್ವಿಲ್ಕರ್, ನ್ಯಾ. ಸಿ.ಟಿ.ರವಿಕುಮಾರ್ ಪೀಠ, ವಿಚಾರಣೆ ಮುಂದೂಡಿದೆ.
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಕರ್ನಾಟಕ ಸರ್ಕಾರ ಅರಣ್ಯ ಹಾಗೂ ವನ್ಯಜೀವಿ ಅಭಯಾರಣ್ಯ ಒಳಗೊಂಡ ಜಾಗದಲ್ಲಿ ಅಣೆಕಟ್ಟು ನಿರ್ಮಾಣಮಾಡುತ್ತಿದೆ. ಇದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಪರಿಸರಕ್ಕಾಗುವ ಹಾನಿ ಪರಿಗಣಿಸಲು ಹಸಿರು ನ್ಯಾಯಮಂಡಳಿ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿತ್ತು. ತಮಿಳುನಾಡಿನ ಕ್ಯಾತೆಯಿಂದಾಗಿ 5912 ಕೋಟಿ ರೂಪಾಯಿ ಅಂದಾಜು ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಅಡ್ಡಿಯಾಗಿದೆ.