ಚೆನ್ನೈ: ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ ಇದೀಗ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದು, ತಮಿಳುನಾಡು ಬಿಜೆಪಿ ಕೂಡ ಸರ್ಕಾರದ ನಿರ್ಣಯಕ್ಕೆ ಬೆಂಬಲ ನೀಡಿದೆ.
ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ನಿರ್ಣಯ ಗೊತ್ತುವಳಿ ಮಂಡಿಸಿದರು. ನಿರ್ಣಯವನ್ನು ಎಲ್ಲಾ ರಾಜಕೀಯ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ತಮಿಳುನಾಡು ರಾಜಕೀಯ ಪಕ್ಷಗಳು ಒಕ್ಕೊರಲಿನಿಂದ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿವೆ.
ತಮಿಳುನಾಡು ಸರ್ಕಾರದ ನಿರ್ಣಯಕ್ಕೆ ನಾವು ಬೆಂಬಲ ನೀಡಿದ್ದೇವೆ ಎಂದು ತಮಿಳುನಾಡು ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಯಿಂದಾಗಿ ತಮಿಳುನಾಡು ರೈತರಿಗೆ ಸಮಸ್ಯೆಯಾಗಲಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು. ಈ ನಿಟ್ಟಿನಲ್ಲಿ ತಮಿಳುನಾಡು ಬಿಜೆಪಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಹೇಳಿದರು.