ಚಾಮರಾಜನಗರ: ಮೈಸೂರು ನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಆದರೆ ಉಪ ಮೇಯರ್ ಚುನಾವಣೆಯಲ್ಲಿ ಯಾರೂ ನಿರೀಕ್ಷೆ ಮಾಡದಂತೆ ಮೇಜರ್ ಟ್ವಿಸ್ಟ್ ಆಗಿ ಉಪ ಮೇಯರ್ ಸ್ಥಾನ ಕೂಡ ಬಿಜೆಪಿ ಪಾಲಾಗಿದೆ.
ಇತ್ತ ಕಾಂಗ್ರೆಸ್ ಗೆ ಎರಡು ಸ್ಥಾನ ಕೈ ತಪ್ಪಿದೆ. ಈ ಸಂಬಂಧ ಗುಂಡ್ಲುಪೇಟೆ ಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೇಯರ್ ಚುನಾವಣೆಯಲ್ಲಿ ಜೆಡಿಎಸ್ನವರು ಮಂಗಗಳಾಗಿದ್ದು, ಎರಡು ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದ್ದಾರೆ. ಬಿಜೆಪಿಯವರು ಜೆಡಿಎಸ್ಗೆ ಒಳ್ಳೇ ಮಕ್ಮಲ್ ಟೋಕಿ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಮೂರು ಪಕ್ಷಗಳು ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರೆ ಖಂಡಿತವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರ್ತಾ ಇತ್ತು. ಆದರೆ ಜೆಡಿಎಸ್, ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡು ಈ ಪರಿಸ್ಥಿತಿ ನಿರ್ಮಾಣ ಮಾಡಿದೆ. ಬೇರೆ ಪಕ್ಷಕ್ಕೆ ಬೆಂಬಲ ನೀಡೋದು ಜ್ಯಾತ್ಯಾತೀತವಾ ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೆ ಅಲ್ಲ ಜೆಡಿಎಸ್ ಪಕ್ಷದ ಕುರಿತಂತೆ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಇದೊಂದು ಅವಕಾಶವಾದ ಪಕ್ಷ ಎಂದಿದ್ದಾರೆ.