ಮೈಸೂರು; ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಣದೀಪ್ ಸುರ್ಜೇವಾಲಾ ಸೇರಿದತೆ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಅಕ್ಟೋಬರ್ 6ರಂದು ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ 2 ದಿನ ಮಡಿಕೇರಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಅಲ್ಲಿಗೆ ಯಾವ ಕಾರ್ಯಕರ್ತ, ಮುಖಂಡರಿಗೆ ಅವಕಾಶವಿಲ್ಲ. ಮಡಿಕೇರಿಯಲ್ಲಿ ಕಾಂಗ್ರೆಸ್ ನ ಯಾವುದೇ ಸಭೆ ಕೂಡ ನಡೆಯಲ್ಲ ಎಂದು ತಿಳಿಸಿದರು.
ಅ.5ರಂದು ಮೈಸೂರಿಗೆ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ. ಅ.6ರಿಂದ ಖರ್ಗೆ ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಅ.6ರಂದೇ ಸೋನಿಯಾ ಗಾಂಧಿ ಕೂಡ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.